ಗ್ರಾಮೀಣ ಪ್ರದೇಶದ ಕೈಗಾರಿಕೆ ಘಟಕಗಳನ್ನು ಪ್ರಾರಂಭಿಸಲು ಅವಕಾಶ

Share

ಹಾವೇರಿ: ಸರ್ಕಾರದ ಸುತ್ತೋಲೆ ಅನ್ವಯ ಜಿಲ್ಲಾ ಕೇಂದ್ರ ಸ್ಥಾನ ಹೊರತುಪಡಿಸಿ ಹಾವೇರಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಕೈಗಾರಿಕೆಗಳನ್ನು ಪ್ರಾರಂಭಿಸಬಹುದಾಗಿದೆ. ಘಟಕಗಳನ್ನು ಪ್ರಾರಂಭಿಸುವ ಮೊದಲು Self declaration ಅನ್ನು ನಿಗದಿತ ನಮೂನೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕರ ಕಚೇರಿಯ ಇ ಮೇಲ್ ವಿಳಾಸ jd-haveri@karnatakaindustry.gov.in ಅಥವಾ ದೂರವಾಣಿ ಸಂಖ್ಯೆ 08375-249028ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.