ಜನಗಣತಿಯ ಯಶಸ್ವಿಗೆ ಸನ್ನದ್ಧರಾಗಲು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಕರೆ

Share

ಹಾವೇರಿ: ದೇಶದ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ಅತ್ಯಂತ ಮಹತ್ವವಾದ ಜನಗಣತಿ ಕಾರ್ಯಕ್ಕೆ ನಿಯೋಜನೆಗೊಂಡ ಚಾರ್ಜ್ ಅಧಿಕಾರಿಗಳು ಸಮರ್ಥವಾಗಿ ತರಬೇತಿಯನ್ನು ಪಡೆದು ಜಿಲ್ಲೆಯಲ್ಲಿ ಜನಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಕರೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನಗಣತಿ ಚಾರ್ಜ ಅಧಿಕಾರಿಗಳಿಗೆ ಆಯೋಜಿಸಲಾದ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಇದೇ ಎಪ್ರಿಲ್ 15 ರಂದು ಜನಗಣತಿಯ ಪೂರ್ವಭಾವಿಯಾಗಿ ಮನೆಗಣತಿ ಕಾರ್ಯ ಹಾಗೂ ಎನ್.ಪಿ.ಆರ್. ಮಾಹಿತಿ ಇಂದಿಕರಣ ಪ್ರಕ್ರಿಯೆ ಆರಂಭವಾಗಲಿದೆ. ಈ ಭಾರಿ ಡಿಜಿಟಲ್ ಮಾದರಿಯಲ್ಲಿ ಆಪ್‍ಗಳ ಮೂಲಕ ಮಾಹಿತಿ ಸಂಗ್ರಹಣೆ ನಡೆಯಲಿದ್ದು, ಎಲ್ಲಾ ಚಾರ್ಜ್ ಅಧಿಕಾರಿಗಳು ಕೈಪಿಡಿ ಹಾಗೂ ಆಪ್‍ಗಳನ್ನು ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಚುನಾವಣಾ ತಹಶೀಲ್ದಾರ ಪ್ರಶಾಂತ ನಾಲವಾರ, ಜನಗಣತಿ ನಿರ್ದೇಶನಾಲಯದ ಮಾಸ್ಟರ್ ಟ್ರೈನರ್ ಮಂಜುನಾಥ್ ಮತ್ತು ಚೇತನ್, ಉಪವಿಭಾಗಾಧಿಕಾರಿಗಳು, ತಹಶೀಲ್ದಾರಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು. ಅರವಿಂದ ಐರಣಿ ಅವರು ಕಾರ್ಯಕ್ರಮ ನಿರ್ವಹಿಸಿದರು.