ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಹುದ್ದೆಗೆ ನಿವೃತ್ತ ಪತ್ರಾಂಕಿತ ಅಧಿಕಾರಿಗಳಿಂದ ಅರ್ಜಿ ಆಹ್ವಾನ

Share

ಹಾವೇರಿ: ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿಮಾಡಲು ನಿವೃತ್ತ ಪತ್ರಾಂಕಿತ ಅಧಿಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು 65 ವರ್ಷದೊಳಗಿರಬೇಕು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಪತ್ರಾಂಕಿತ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿರಬೇಕು. ರೂ.32,000 ಮಾಸಿಕ ಸಂಚಿತ ವೇತನ ಹಾಗೂ ಒಂದು ವರ್ಷದ ಅವಧಿಗೆ ಅಥವಾ ಸರ್ಕಾರದಿಂದ/ಇಲಾಖೆಯಿಂದ ಭರ್ತಿಮಾಡುವವರೆಗೂ ಇದರಲ್ಲಿ ಯಾವುದು ಮೊದಲೋ ಅದರಂತೆ. ಸಂಚಿತ ವೇತನ ಹೊರತುಪಡಿಸಿ ಯಾವುದೇ ಭತ್ಯೆಗಳು ಇರುವುದಿಲ್ಲ.

ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಸವೇಶ್ವರ ನಗರ, ಬಿ ಬ್ಲಾಕ್ 5ನೇ ಕ್ರಾಸ್, ಆಂಜನೇಯ ಗುಡಗೂರ ಬಿಲ್ಡಿಂಗ್ ಹಾವೇರಿ ಈ ವಿಳಾಸದಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ದಿನಾಂಕ 07-11-2019ರ ಸಾಯಂಕಾಲ 4-30ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08375-233062ನ್ನು ಸಂಪರ್ಕಿಸಲು ಕೋರಲಾಗಿದೆ.