ಜೂನ್‌ 25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಜೂನ್‌ 18 ಪಿಕ್ಸ್

Share

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4ರ ವರೆಗೆ ನಡೆಸಲು ತೀರ್ಮಾನಿಸಲಾಗಿದ್ದು, ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆ ಜೂನ್ 18ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2,879 ಪರೀಕ್ಷಾ ಕೇಂದ್ರಗಳಲ್ಲಿ 43,720 ಕೊಠಡಿಗಳನ್ನು ಬಳಸಲಾಗುತ್ತಿದೆ. ಪ್ರತಿ ಕೊಠಡಿಯಲ್ಲಿ ಅಗತ್ಯ ಶಾರೀರಿಕ ಅಂತರ ಕಾಯ್ದುಕೊಂಡು ಆಸನದ ವ್ಯವಸ್ಥೆ ಮಾಡಲಾಗುವುದು ಎಂದರು.

ಒಟ್ಟು 8,48,196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಭಾರತ್ ಸ್ಕೌಟ್ಸ್ ನವರು ಒಂದೊಂದು ಮಾಸ್ಕ್ ಗಳನ್ನು ವಿದ್ಯಾರ್ಥಿಗಳಿಗೆ ಕೊಡಲಿದ್ದಾರೆ. ರಾಮಕೃಷ್ಣ ಮಿಶನ್ ನಿಂದ 2 ಲಕ್ಷ ಮಾಸ್ಕ್ ಕೊಡಲಿದ್ದಾರೆ ಎಂದು ಹೇಳಿದರು.

(ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್)

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಬಳಸಲಾಗುವುದು. ಎಂಬೆಸಿ ಗ್ರೂಪ್ ನವರು ಇದನ್ನು ಒದಗಿಸಲಿದ್ದಾರೆ. ಜ್ವರದ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗುವುದು. ಸಮಾಜ ಕಲ್ಯಾಣ ಶಾಲೆಗಳನ್ನು ಗಳನ್ನು ಕ್ವಾರಂಟೈನ್ ಮಾಡಿದ್ದರಿಂದ ಅಂತಹ ಪರೀಕ್ಷಾ ಕೇಂದ್ರಗಳ ವಿದ್ಯಾರ್ಥಿಗಳಿಗೆ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.