ಟಿಪ್ಪು ಜಯಂತಿ ರದ್ದು: ಬಿಎಸ್​​ವೈ ಆದೇಶ

Share

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರಕಾರದ ಆಡಳಿತಾವಧಿಯಲ್ಲಿ ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಮಂಗಳವಾರ ರದ್ದುಗೊಳಿಸಿದೆ.

ತಕ್ಷಣವೇ ಜಾರಿಗೆ ಬರುವಂತೆ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದಲ್ಲಿ ಟಿಪ್ಪು ಜಯಂತಿಗೆ ಚಾಲನೆ ನೀಡಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯಾದ್ಯಂತ ತೀವ್ರ ಪರ, ವಿರೋಧ ಚರ್ಚೆಗೆ ಗ್ರಾಸವಾಗಿತ್ತು.

ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಪ್ರತಿ ವರ್ಷ ನವೆಂಬರ್ 10 ರಂದು ಟಿಪ್ಪು ಜಯಂತಿಯನ್ನು ಸರಕಾರದ ವತಿಯಿಂದಲೇ ಆಚರಿಸಲಾಗುತ್ತಿತ್ತು. ಆದರೆ, ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಲ್ಲದೇ ಟಿಪ್ಪು ಜಯಂತಿಯನ್ನು ರದ್ದುಪಡಿಸಬೇಕೆಂದು ಸತತವಾಗಿ ಆಗ್ರಹಿಸಿತ್ತು.