ಡೋಲು ಮತ್ತು ನಾದಸ್ವರ ತರಬೇತಿಗೆ ಸವಿತಾ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Share

ಹಾವೇರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-20ನೇ ಸಾಲಿಗೆ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕೆಲಗಳಲ್ಲಿ ನಾಲ್ಕು ವರ್ಷಗಳ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ತರಬೇತಿ ನೀಡಲಾಗುವುದು. ಆಸಕ್ತ ಸವಿತಾ ಸಮಾಜದ ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿಮಾಡಿದ ಅರ್ಜಿಯನ್ನು ದಿನಾಂಕ 04-06-2019ರೊಳಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ www.backwardclasses.kar.nic.in ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

http://backwardclasses.kar.nic.in/PDF/OnlineApplication/Training/2019-20/SavitaSamaja/Application_Form.pdf