ತೋಟಗಾರಿಕೆ ತರಬೇತಿಗೆ ರೈತರಿಂದ ಅರ್ಜಿ ಆಹ್ವಾನ

Share

ಹಾವೇರಿ: ಗದಗ ಹಾಗೂ ಹಿಡಕಲ್ ಡ್ಯಾಂ ಬೆಳಗಾವಿ ತೋಟಗಾರಿಕಾ ತರಬೇತಿ ಕೇಂದ್ರದಿಂದ ತೋಟಗಾರಿಕಾ ತರಬೇತಿ ಪಡೆಯಲು ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಸಕ್ತ 2020-21ನೇ ಸಾಲಿನ ತೋಟಗಾರಿಕೆ ತರಬೇತಿಯನ್ನು ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಹಾಗೂ ಹಿಡಕಲ್ ಡ್ಯಾಂ ಬೆಳಗಾವಿ ಜಿಲ್ಲೆಯ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಪರುಷ ಅಭ್ಯರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ. 2-5-2020 ರಿಂದ 28-2-2021 ವರೆಗೆ 10ತಿಂಗಳ ಅವಧಿಯ ತರಬೇತಿಯಾಗಿದೆ. ಹಾವೇರಿ ಜಿಲ್ಲೆಯಿಂದ ಗದಗ (ಮಹಿಳಾ) ತೋಟಗಾರಿಕೆ ತರಬೇತಿ ಕೇಂದ್ರಕ್ಕೆ ಪರಿಶಿಷ್ಟ ಜಾತಿ-1, ಇತರೆ-6 ಸೇರಿದಂತೆ 7 ಹಾಗೂ ಹಿಡಕಲ್ ಡ್ಯಾಂ ಬೆಳಗಾವಿ ಜಿಲ್ಲೆಯ ತೋಟಗಾರಿಕೆ ತರಬೇತಿ ಕೇಂದ್ರಕ್ಕೆ (ಪುರುಷರು) ಬೆಳಗಾವಿ ಪರಿಶಿಷ್ಟ ಜಾತಿ-1, ಪರಿಶಿಷ್ಟ ಪಂಗಡ-1, ಇತರೆ-5 ಸೇರಿದಂತೆ 7 ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ನಮೂನೆಗಳನ್ನು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಯಿಂದ ಅಥವಾ ಇಲಾಖಾ ವೆಬ್‍ಸೈಟ್ www.horticulture.kar.nic.in ನಲ್ಲಿ ದಿ.30-3-2020 ರಿಂದ 24-4-2020ರವರೆಗೆ ಪಡೆಯಬಹುದು ಅಥವಾ ಡೌನ್‍ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿ ಸಲ್ಲಿಸುವಾಗ ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ 30ರೂ, ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ 15 ರೂ ಮೌಲ್ಯದ ಇಂಡಿಯನ್ ಪೋಸ್ಟಲ್ ಆರ್ಡರ್‍ನ್ನು ತೋಟಗಾರಿಕೆ ಉಪನಿರ್ದೆಶಕರು ಹೆಸರಿನಲ್ಲಿ ಪಡೆದು ಅರ್ಜಿ ಜೊತೆಗೆ ಲಗತ್ತಿಸಿ ಅಗತ್ಯ ದಾಖಲಾತಿಗಳೊಂದಿಗೆ 24-4-2020ರೊಳಗೆ ಅರ್ಜಿ ಸಲ್ಲಿಸಬೇಕು. 27-4-2020ರಂದು ದೇವಗಿರಿಯ ಜಿಲ್ಲಾಡಳಿತ ಭವನದ ತೋಟಗಾರಿಕೆ ಉಪನಿರ್ದೇಶಕರ ಕಚೇರಿಯಲ್ಲಿ ಸಂದರ್ಶನವಿರುತ್ತದೆ.

ಕನಿಷ್ಠ ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳ ತಂದೆ, ತಾಯಿ, ಪೋಷಕರು ಕಡ್ಡಾಯವಾಗಿ ಕೃಷಿ ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಪಹಣಿ ನೀಡುವುದು ಕಡ್ಡಾಯವಾಗಿರುತ್ತದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಟ 18 ವರ್ಷ ಮತ್ತು 33 ವರ್ಷ ಹಾಗೂ ಇತರರಿಗೆ ಕನಿಷ್ಟ 18ವರ್ಷ ಗರಿಷ್ಟ 30 ವರ್ಷದೊಳಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾವೇರಿ ಅಥವಾ ಆಯಾ ತಾಲೂಕಾ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ದೂರವಾಣಿ ಸಂಖ್ಯೆ 08375-249093 ಸಂಪರ್ಕಿಸಬಹುದು.