ನಗರ ಹಾಗೂ ಪಟ್ಟಣ ಪ್ರದೇಶದ ವಿವಿಧ ಅಂಗಡಿಗಳ ಮೇಲೆ ದಾಳಿ ರೂ.4650 ದಂಡ ವಸೂಲಿ

Share

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ರಾಣೇಬೆನ್ನೂರು ನಗರ, ಹಲಗೇರಿ ಹಾಗೂ ತುಮ್ಮಿಕಟ್ಟಿ ಪಟ್ಟಣದ ಆಯ್ದ ಅಂಗಡಿಗಳ ಮೇಲೆ ಗುರುವಾರ ದಾಳಿ ನಡೆಸಿ ರೂ.4650 ದಂಡ ವಸೂಲಿ ಮಾಡಲಾಗಿದೆ.

ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟಮಾಡುತ್ತಿರುವ ಅಂಗಡಿ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿಯಲ್ಲಿ 32 ಪ್ರಕಣದಲ್ಲಿ ರೂ.4150 ಮತ್ತು ಕಲಂ 6ಬಿ ಅಡಿಯಲ್ಲಿ ಮೂರು ಪ್ರಕಣದಲ್ಲಿ ರೂ.500 ಸೇರಿ 4650 ರೂ. ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ.ಸಂತೋಷ ವಿ.ದಡ್ಡಿ ಹಾಗೂ ದಾದಾಪೀರ ಹುಲಿಕಟ್ಟಿ, ರಾಣೇಬೆನ್ನೂರು ತಾಲೂಕು ಆರೋಗ್ಯಾಧಿಕಾರಿ ಡಾ.ಸಂತೋಷ.ಜಿ., ಆಹಾರ ಸುರಕ್ಷತಾ ಅದಿಕಾರಿ ಎಸ್.ಸಿ.ಕೋರಿ, ನಗರಸಭೆ ಹಿರಿಯ ಆರೋಗ್ಯ ಸಹಾಯಕ ಜಗದೀಶ ವೈ.ಕೆ., ಮಹೇಶ ಕಮ್ಮೂರ ಹಾಗೂ ಪೊಲೀಸ್ ಸಿಬ್ಬಂದಿ ಇತತರು ಉಪಸ್ಥಿತರಿದ್ದರು.