ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

Share

ಹಾವೇರಿ: ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ನಾಗರಿಕ ಬಂದೂಕು ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇಚ್ಚೆಯುಯಳ್ಳ ನಾಗರಿಕರು ದಿನಾಂಕ 24-01-2020 ರಿಂದ 09-02-2020 ರೊಳಗಾಗಿ ನಿಗದಿತ ಅರ್ಜಿ ನಮೂನೆಯನ್ನು ಸಶಸ್ತ್ರ ಪೊಲೀಸ್ ನಿರೀಕ್ಷಕರು, ಜಿಲ್ಲಾ ಸಶಸ್ತ್ರ ಮೀಸಲು ಪಡೆ, (ಹಳೇ ತಹಶೀಲ್ದಾರ ಕಛೇರಿ) ಹಾವೇರಿ ಕಛೇರಿಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ನಿಗದಿತ ಸಮಯದಲ್ಲಿ ಸಲ್ಲಿಸದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸಶಸ್ತ್ರ ಪೊಲೀಸ್ ನಿರೀಕ್ಷಕರಾದ ಮಾರುತಿ ಎಸ್.ಹೆಗೆಡೆ ಅವರು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಚಿದು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಜಿ.ದೇವರಾಜ ಅವರು ತಿಳಿಸಿದ್ದಾರೆ.