ನೇಕಾರರ ಸಾಲ ಮನ್ನಾ, ಜುಲೈ 29ಕ್ಕೆ ಬಹುಮತ ಸಾಬೀತು: ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

Share

ಬೆಂಗಳೂರು: ಜುಲೈ 29 ಕ್ಕೆ ಬಹುಮತ ಸಾಬೀತು ಮಾಡುವುದಾಗಿ ನೂತನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ.

ಪ್ರಮಾಣವಚನ ಸ್ವೀಕರಿಸಿ, ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ತಮ್ಮ ನೇತೃತ್ವದ ಸರ್ಕಾರದ ಮೊದಲ ನಿರ್ಣಯಗಳನ್ನು ತಿಳಿಸಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯದಿಂದಲೂ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ಕೇಂದ್ರ ಸರ್ಕಾರ ತಿಂಗಳಿಗೆ 2 ಸಾವಿರ ರೂಪಾಯಿಯಂತೆ ವಾರ್ಷಿಕ 6 ಸಾವಿರ ರೂಪಾಯಿ ನೀಡುತ್ತಿದೆ. ಈ ಯೋಜನೆಗೆ ರಾಜ್ಯ ಸರ್ಕಾರವೂ ಅನುದಾನ ನೀಡಲಿದ್ದು, 3 ಕಂತುಗಳಲ್ಲಿ ಒಟ್ಟಾರೆ 4 ಸಾವಿರ ರೂಪಾಯಿ ಹಣವನ್ನು ರೈತರ ಖಾತೆಗೆ ತಲುಪಲಿದೆ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ಈ ನಿರ್ಣಯದಿಂದ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಒಟ್ಟಾರೆ 10 ಸಾವಿರ ರೂಪಾಯಿ ಹಣ ಸಿಗಲಿದೆ. ನೇಕಾರರ 100 ಕೋಟಿ ರೂಪಾಯಿ ಸಾಲ ಮನ್ನಾವನ್ನೂ ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗೋಷ್ಟಿಯಲ್ಲಿ ಘೋಷಿಸಿದ್ದಾರೆ.