ಪ್ರೋತ್ಸಾಹಧನಕ್ಕಾಗಿ ಎಸ್.ಸಿ., ಎಸ್.ಟಿ. ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Share

ಹಾವೇರಿ: ಕಳೆದ 2018-19ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ.ಪದವಿ ಮತ್ತು ಉನ್ನತ ಶಿಕ್ಷಣ ಕೋರ್ಸುಗಳಲ್ಲಿ ಅಂತಿಮ ವರ್ಷದಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ರ್ತೀರಾದ ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾ ಹಧನ ನೀಡಲು ಸಮಾಜ ಕಲ್ಯಾಣ ಇಲಾಖೆಯಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖಾ ವೆಬ್‍ಸೈಟ್ ರಲ್ಲಿನ ರಲ್ಲಿ ಆನ್‍ಲೈನ್ https://sw.kar.nic.in/swprizemoney/ home ರಲ್ಲಿ Online Application (Passed in 2019 only) ದಿ. 31-07-2019ರೊಳಗಾಗಿ ಅರ್ಜಿ ಸಲ್ಲಿಸಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್‍ನಲ್ಲಿನ ಸೂಚನೆಗಳನ್ನು ಗಮನಿಸಬೇಕು ಹಾಗೂ ಹೆಲ್ಪಲೈನ್ ಸಂಖ್ಯೆಯನ್ನು ಸಂಪರ್ಕಿಸಬೇಕು.
ವಿದ್ಯಾರ್ಥಿಗಳ ಇತ್ತೀಚಿನ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಕೊನೆಯ ಶೈಕ್ಷಣಿಕ ವರ್ಷದ ಅಂಕಪಟ್ಟಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬ್ಯಾಂಕ್ ಪಾಸ್ ಬುಕ್, ವಿದ್ಯಾರ್ಥಿ ಹಾಗೂ ಪಾಲಕರ ಮೊಬೈಲ್ ಸಂಖ್ಯೆಯೊಂದಿಗೆ ಅರ್ಜಿ ಸಲ್ಲಿಸಬೇಕು. ಮುದ್ರಿತ ಅರ್ಜಿ ನಮೂನೆ ಹಾಗೂ ಎಲ್ಲ ದಾಖಲೆಗಳ ದೃಢಿಕೃತ ದಾಖಲೆಗಳನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಆಡಳಿತ ಭವನ, ಬಿ ಬ್ಲಾಕ್ ರೂಂ.25 ಹಾವೇರಿ –ದೇವಗಿರಿ ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ರಜೆ ದಿನ ಹೊರತುಪಡಿಸಿ ಕಚೇರಿ ದೂರವಾಣಿ ಸಂಖ್ಯೆ:08375-249292 ಅಥವಾ 08375-297390ನ್ನು ಸಂಪರ್ಕಿಸಲು ಕೋರಲಾಗಿದೆ.