ಫೆಲೋಶಿಪ್ ಮಂಜೂರಾತಿಗೆ ಅರ್ಜಿ ಆಹ್ವಾನ

Share

ಹಾವೇರಿ: ಪ್ರಸಕ್ತ ಸಾಲಿನಲ್ಲಿ ಪೂರ್ಣಾವಧಿ ಪಿ.ಎಚ್.ಡಿ.ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ನವೀಕರಣ ವಿದ್ಯಾರ್ಥಿಗಳಿಗೆ ಮಾಸಿಕ ಹತ್ತುಸಾವಿರ ರೂ. ವ್ಯಾಸಂಗ ವೇತನ/ಫಿಲೋಶಿಪ್ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‍ಲೈನ್ ಅರ್ಜಿ ಸಲ್ಲಿಸಲು ದಿನಾಂಕ 30-09-2019 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್‍ಸೈಟ್ www.backwardclasses.kar.nic.in ನ್ನು ನೋಡಬಹುದು ಹಾಗೂ ಸಹಾಯವಾಣಿ ಸಂಖ್ಯೆ:8050770004ನ್ನು ಕಚೇರಿ ಕೆಲಸದ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.