ಬ್ಯಾಂಕ್,ಎ.ಟಿ.ಎಂ ಸ್ವಚ್ಛತೆಗೆ ಸೂಚನೆ

Share

ಹಾವೇರಿ: ಹಾವೇರಿ ಉಪವಿಭಾಗ ವ್ಯಾಪ್ತಿಯ ಎಲ್ಲ ಬ್ಯಾಂಕುಗಳ ಎ.ಟಿ.ಎಂ. ಹಾಗೂ ಬ್ಯಾಂಕುಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಣದ ವಹಿವಾಟು ನಡೆಸುತ್ತಿರುವ ಹಿನ್ನೆಲೆಯಲ್ಲಿ ಸದರಿ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಪ್ರತಿ ಎರಡು ಗಂಟೆಗೊಮ್ಮೆ ಎ.ಟಿ.ಎಂ.ಕೇಂದ್ರವನ್ನು ಸ್ವಚ್ಛಗೊಳಿಸುವಂತೆ ಹಾವೇರಿ ಉಪವಿಭಾಗಾಧಿಕಾರಿ ಡಾ.ದಿಲೀಷ್ ಸಸಿ ಅವರು ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೊರೋನಾ ವೈರಸ್ ದೇಶದಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಕಾರಣ ಸಾರ್ವಜನಿಕ ಸಮೂಹದಲ್ಲಿ ವೈರಸ್ ಹರಡುವುದನ್ನು ತಡೆಗಟ್ಟಲು ಸ್ವಚ್ಛತೆಗೆ ಆದ್ಯತೆ ನೀಡಬೇಕಾಗಿದೆ. ಈ ಕುರಿತಂತೆ ಸ್ವಚ್ಛತೆ ಆದ್ಯತೆ ನೀಡುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಪತ್ರಬರೆದು ಎಲ್ಲ ಬ್ಯಾಂಕ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಸೂಚಿಸಿದ್ದಾರೆ.