ಭಾನುವಾರ ಕಫ್ರ್ಯೂ ಸಡಿಲಿಕೆ: ಜಿಲ್ಲಾಧಿಕಾರಿ ಆದೇಶ

Share

ಹಾವೇರಿ: ಕೋವಿಡ್ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಜಿಲ್ಲೆಯಾದ್ಯಂತ ಮೇ 31 ರಂದು ಭಾನುವಾರ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆವರೆಗೆ ಪೂರ್ಣದಿನದ ಕಫ್ರ್ಯೂ ತೆರವುಗೊಳಿಸಿ ವಿನಾಯಿತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.

ಆದರೆ ಭಾನುವಾರ ವಾರದ ಎಲ್ಲ ದಿನಗಳ ರಾತ್ರಿ 7 ರಿಂದ ಬೆಳಿಗ್ಗೆ 7 ಗಂಟೆವರೆಗೆ ಯಥಾಪ್ರಕಾರ ಕಫ್ರ್ಯೂ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.