ಭಾರಿ, ಲಘು ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಿದ KSRTC

Share

ಬೆಂಗಳೂರು, ಜೂನ್ 16: ಕೌಶಲ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಉಚಿತವಾಗಿ 30 ದಿನಗಳಲ್ಲಿ ಭಾರೀ, ಲಘು ವಾಹನ ಚಾಲನಾ ತರಬೇತಿ ನೀಡಲು ಕೆಎಸ್ಆರ್ ಟಿಸಿ ( KSRTC ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC) ಈ ಕುರಿತು ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಕೋಲಾರದ ಮಾಲೂರಿನ KSRTC ಕೇಂದ್ರೀಯ ತರಬೇತಿ ಕೇಂದ್ರದಲ್ಲಿ ಉಚಿತ ಭಾರೀ, ಲಘು ವಾಹನ ಚಾಲನಾ ತರಬೇತಿ ಮತ್ತು ತಾಂತ್ರಿಕ ತರಬೇತಿ (ವಸತಿ ಮತ್ತು ಊಟ ಸೇರಿ) ನೀಡಲಾಗುತ್ತದೆ. ತರಬೇತಿಯ ಅವಧಿ 30 ದಿನಗಳು ಎಂದು ಹೇಳಿದ್ದಾರೆ. ಮೊದಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲ ಅವಕಾಶ ನೀಡಲಾಗುತ್ತದೆ.

ಚಾಲನಾ ತರಬೇತಿ ಅರ್ಹತೆ ಮತ್ತು ಬೇಕಾದ ದಾಖಲೆಗಳು; ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ (ಉತ್ತೀರ್ಣ, ಅನುತ್ತೀರ್ಣ) ಅಂಕಪಟ್ಟಿ ಸಲ್ಲಿಸಬೇಕು. ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ಮೀರಿರಬಾರದು. ನಾಲ್ಕು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಆಧಾರ್ ಕಾರ್ಡ್ ಸಲ್ಲಿಸಬೇಕು.

ಭಾರೀ ವಾಹನ ತರಬೇತಿಗೆ ಅರ್ಜಿ ಸಲ್ಲಿಸುವವರು ಲಘು ವಾಹನ ಚಾಲನಾ ಪರವಾನಿಗೆಯನ್ನು ಪಡೆದು ಕನಿಷ್ಠ ಒಂದು ವರ್ಷ ಪೂರೈಸಿರಬೇಕು. ಭಾರೀ ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಕನಿಷ್ಠ 21, ಗರಿಷ್ಠ 35 ಮೀರಿರಬಾರದು. ಆಯ್ಕೆಯಾದ ಅಭ್ಯರ್ಥಿಗಳು 30 ದಿನಗಳು ತರಬೇತಿ ಪಡೆಯಲಿದ್ದು, ಊಟ ಮತ್ತು ಉಚಿತ ವಸತಿ ಸೌಲಭ್ಯ ದೊರೆಯುತ್ತದೆ.

ತಾಂತ್ರಿಕ ತರಬೇತಿ ವಿವರ; ಟೈರ್ ಫಿಟ್ಟರ್, ಆಟೋ ಮೆಕಾನಿಕ್, ವೆಲ್ಡರ್ ತರಬೇತಿ, ತಾಂತ್ರಿಕ ತರಬೇತಿಯ ಅವಧಿ 90 ದಿನ.
ಎಸ್ಎಸ್ಎಲ್‌ಸಿ ಪಾಸ್/ಫೇಲ್ ಆಗಿದ್ದವರು ಅರ್ಜಿ ಸಲ್ಲಿಸಬಹುದು. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನಾಲ್ಕು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಸಲ್ಲಿಸುವುದು.

ಅರ್ಜಿ ಸಲ್ಲಿಸುವ ವಿಳಾಸ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಕೇಂದ್ರೀಯ ತರಬೇತಿ ಕೇಂದ್ರ, ಕೋಲಾರ ಮುಖ್ಯ ರಸ್ತೆ, ಬಸ್ ಡಿಪೋ ಹತ್ತಿರ, ಮಾಲೂರು -563130 ಇಲ್ಲಿಗೆ ಕಳುಹಿಸಿ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7760990133, 7760992539ಗೆ ಕರೆ ಮಾಡಬಹುದು.