ಮಾ.31 ರವರೆಗೆ ಕರ್ನಾಟಕ ಸಂಪೂರ್ಣ ಲಾಕ್ ಡೌನ್: ರಾಜ್ಯ ಸರಕಾರ ಮಹತ್ವದ ಆದೇಶ

Share

ಬೆಂಗಳೂರು: ಮಹಾಮಾರಿ ಕರೋನಾ (ಕೋವಿಡ್19) ವೈರಸ್ ಸೋಂಕ ಹರಡದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮಾ. 31 ರವರೆಗೆ ಕರ್ನಾಟಕ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2010 ಅಡಿಯಲ್ಲಿ ರಾಜ್ಯ ಸರಕಾರ ಲಾಕ್ ಡೌನ್ ಕ್ರಮ ತೆಗೆದುಕೊಂಡಿದ್ದು, ಆದೇಶದ ಅನ್ವಯ 5 ಕ್ಕಿಂತ ಹೆಚ್ಚು ಜನರು ಒಂದು ಕಡೆ ಗುಂಪು ಸೇರುವಂತಿಲ್ಲ. ಅನವಶ್ಯಕವಾಗಿ ಮನೆಯಿಂದ ಹೊರ ಬಂದರೆ ಅಂತವರ ವಿರುದ್ಧ ಕಠಿಣ ಸರಕಾರ ಕ್ರಮ ತೆಗೆದುಕೊಳ್ಳಬಹುದು

ಈ ಮೊದಲು ಕರೋನಾ ಸೋಂಕು ಪತ್ತೆಯಾದ ರಾಜ್ಯದ 9 ಜಿಲ್ಲೆಗಳನ್ನು ಲಾಕ್ ಡೌನ್ ಮಾಡಿ ಆದೇಶಿಸಿತ್ತು. ಆದರೆ ಇಂದು ಮತ್ತೆ ರಾಜ್ಯದಲ್ಲಿ 7 ಹೊಸ ಪ್ರಕರಣಗಳು ಪತ್ತೆಯಾದ ಹಿನ್ನಲೆಯಲ್ಲಿ ಮಾ.31 ರವರೆಗೆ ಸಂಪೂರ್ಣ ಲಾಕ್ ಡೌನ್ ಮಾಡಿ ಆದೇಶ ಹೊರಡಿಸಿದೆ.

ಲಾಕ್ ಡೌನ್ ಹಿನ್ನಲೆಯಲ್ಲಿ ಮಾ.31 ರವರೆಗೆ ಅಗತ್ಯ ಹಾಗೂ ತುರ್ತು ಸೇವೆಗಳನ್ನು ಹೊರತು ಪಡಿಸಿ ಎಲ್ಲಾ ಸೇವೆಗಳು ಬಂದ್ ಆಗಲಿದ್ದು, ಸರಕಾರದ ಆದೇಶವನ್ನು ಕಟ್ಟು ನಿಟ್ಟಾಗಿ ಸಾರ್ವಜನಿಕರು ಪಾಲಿಸಬೇಕಾಗುತ್ತದೆ.