ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

Share

ಹಾವೇರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರವರೆಗೆ ವಿಸ್ತರಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಬೇಕು. ನಂತರ ಸಂಬಂಧಿಸಿದ ಶಾಲೆಗಳಿಗೆ ಆನ್‍ಲೈನ್ ಅರ್ಜಿಗಳ ಎರಡು ಪ್ರತಿಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಶಿವಾಜಿ ನಗರ, 3ನೇ ಕ್ರಾಸ್ ಹಾವೇರಿ ದೂರವಾಣಿ ಸಂಖ್ಯೆ :08375-234505ನ್ನು ಸಂಪರ್ಕಿಸಲು ಕೋರಲಾಗಿದೆ.