ಮೇ 22 ರಂದು ಸವಣೂರಲ್ಲಿ ಎಸಿಬಿಯಿಂದ ಜನಸಂಪರ್ಕ ಸಭೆ ಹಾಗೂ ಅಹವಾಲು ಸ್ವೀಕಾರ

Share

ಹಾವೇರಿ: ಹಾವೇರಿ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹದಳದಿಂದ ಜನಸಂಪರ್ಕ ಸಭೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಸವಣೂರು ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಮೇ 22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗ ಹಮ್ಮಿಕೊಳ್ಳಲಾಗಿದೆ.
ಸರ್ಕಾರಿ ಕಚೇರಿಯಲ್ಲಿ ಸರ್ಕಾರದ ಕೆಲಸ ಮಾಡಿಕೊಡಲು ಅಧಿಕಾರಿ ಹಾಗೂ ಸಿಬ್ಬಂ ದಿಗಳು ಲಂಚಕ್ಕೆ ಬೇಡಿಕೆ ಇಟ್ಟಲ್ಲಿ ಹಾವೇರಿ ಎಸಿಬಿ ಪೊಲೀಸ್ ಠಾಣೆಗೆ ಖುದ್ದಾಗಿ ಅಥವಾ ಪೊಲೀಸ್ ಉಪಾಧೀಕ್ಷಕರ ಮೊ:9480806229, ಪೊಲೀಸ್ ನಿರೀಕ್ಷಕರ ಮೊ:9480806289 ಹಾಗೂ ಕಚೇರಿ ದೂರವಾಣಿ ಸಂಖ್ಯೆ:08375-235533ನ್ನು ಸಂಪರ್ಕಿಸಿ ಸಂಕ್ಷಿಪ್ತ ಮಾಹಿತಿ ನೀಡಬಹುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹಾವೇರಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.