ಯತಿ ಶ್ರೇಷ್ಠ ಉಡುಪಿ ಪೇಜಾವರ ಶ್ರೀ ಇನ್ನಿಲ್ಲ

Share

ಉಡುಪಿ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಉಡುಪಿ ಪೇಜಾವರ ಮಠದ ವಿಶ್ವತೀರ್ಥ ಶ್ರೀಗಳು (88) ಭಾನುವಾರ ವಿಧಿವಶರಾದರು.

ಶ್ರೀಗಳ ಕೊನೆಯ ಆಸೆಯಂತೆ ಅವರನ್ನು ಭಾನುವಾರ ವೆಂಟಿಲೇಟರ್ ಸಹಿತ ಅಂಬುಲೆನ್ಸ್ ಮೂಲಕ ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠಕ್ಕೆ ಆಸ್ಪತ್ರೆಯಿಂದ ಕರೆಯಲಾಗಿತ್ತು. ಅಂತಿಮವಾಗಿ ಚಿಕಿತ್ಸೆ ಫಲಕಾರಿಯಾಗದೇ ಮಠದಲ್ಲಿಯೇ ಶ್ರೀಗಳು ವಿಧಿವಶರಾದರು.

ರಕ್ತದೊತ್ತಡ, ಮಧುಮೇಹ, ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳು ಕಳೆದ ಶುಕ್ರವಾರ ಬೆಳಗಿನ ಜಾವ 5 ಗಂಟೆಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 9 ದಿನಗಳಿಂದ ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತಿತ್ತು.

ಶ್ರೀಗಳ ಅಂತಿಮ ದರ್ಶನಕ್ಕಾಗಿ ಉಡುಪಿಯ ಅಜ್ಜರಕಾಡು ಹಾಗೂ ಬೆಂಗಳೂರು ನ್ಯಾಷನಲ್ ಕಾಲೇಜು ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.