ರಮೇಶ್‌ ಜಾರಕಿಹೊಳಿ, ಮಹೇಶ್‌ ಕುಮಟಳ್ಳಿ, ಆರ್‌ ಶಂಕರ್‌ ಅನರ್ಹ: ಸ್ಪೀಕರ್ ಘೋಷಣೆ

Share

ಬೆಂಗಳೂರು: ದೋಸ್ತಿ ಸರಕಾರದ ವಿರುದ್ಧ ಬಂಡಾಯ ಸಾರಿದ್ದ ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೊಳಿ, ಅಥಣಿ ಕ್ಷೇತ್ರದ ಶಾಸಕ ಮಹೇಶ್‌ ಕುಮಟಳ್ಳಿ,ರಾಣೆಬೆನ್ನೂರು ಶಾಸಕ ಆರ್‌. ಶಂಕರ್‌ ಅವರನ್ನು ವಿಧಾನಸಭಾ ಸ್ಪೀಕರ್‌ ಕೆ.ಆರ್‌. ರಮೇಶ್‌ ಕುಮಾರ್‌ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ಶಕ್ತಿಸೌಧ ವಿಧಾನಸೌದಲ್ಲಿ ರಮೇಶ್‌ ಕುಮಾರ್‌ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನರ್ಹಗೊಂಡ ಶಾಸಕರು ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ಈ ವಿಧಾನಸಭೆ ಅವಧಿ ಇರುವವರೆಗೂ ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ರಮೇಶ್‌ ಕುಮಾರ್‌ ಸ್ಪಷ್ಟಪಡಿಸಿದರು.
ಉಳಿದ 13 ಅತೃಪ್ತ ಶಾಸಕರ ‌ರಾಜೀನಾಮೆ‌ ವಿಚಾರವನ್ನು ಶೀಘ್ರವಾಗಿ ಇತ್ಯರ್ಥ ‌ಮಾಡಲಾಗುವುದು. ವಾರ, ತಿಂಗಳಲ್ಲ, ಕೆಲವೇ ದಿನಗಳಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ಸ್ಪೀಕರ್ ಸ್ಪಷ್ಟಪಡಿಸಿದರು.