ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆ : ಮುಖ್ಯಮಂತ್ರಿ ಬಿಎಸ್ ವೈ

Share

ಮಣಿಪಾಲ: ಉಸಿರಾಟದ ಸಮಸ್ಯೆಯಿಂದ ಉಡುಪಿ ಪೇಜಾವರ ಮಠದ ವಿಶ್ವತೀರ್ಥ ಶ್ರೀಗಳು ಭಾನುವಾರ ವಿಧಿವಶರಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಶ್ರೀಗಳ ಅಂತಿಮ ದರ್ಶನಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಸಕಲ ಸರಕಾರಿ ಗೌರವಗಳೊಂದಿಗೆ ಎಲ್ಲ ವಿಧಿವಿಧಾನಗಳನ್ನು ಕೈಗೊಳ್ಳಲಾಗುತ್ತದೆ ಎಂದರು.