ರಾಜ್ಯ ಸಮ್ಮಿಶ್ರ ಸರಕಾರ ಸುಭದ್ರ, ನಾಲ್ಕು ವರ್ಷ ಕುಮಾರಸ್ವಾಮಿ ಸಿಎಂ: ಜಿ ಪರಮೇಶ್ವರ

Share

ಬೆಂಗಳೂರು: ಎಲ್ಲ ಮೈತ್ರಿ ಸರಕಾರದ ಶಾಸಕರು ನಮ್ಮ ಬಳಿಯೇ ಇದ್ದು, ಲೋಕಸಭಾ ಚುನಾವಣೆಯ ಫಲಿತಾಂಶ ಸಮ್ಮಿಶ್ರ ಸರಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲವೆಂದು ಡಿಸಿಎಂ ಡಾ.ಜಿ. ಪರಮೇಶ್ವರ ಹೇಳಿದರು.

ಲೋಕಸಭೆಯ ಫಲಿತಾಂಶದ ಬಳಿಕ ಮೊದಲ ಬಾರಿ ಬೆಂಗಳೂರಿನಲ್ಲಿ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಪಕ್ಷದವರು ಸರಕಾರ ಅಸ್ಥಿರಗೊಳಿಸಲು ವಿಫಲವಾದ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯ ಆಪರೇಷನ್ ಕಮಲ ಕ್ಕೆ ನಾವು ಅವಕಾಶ ಕೊಡುವುದಿಲ್ಲ. ಮುಖ್ಯಮಂತ್ರಿ ಕುಮಾ ರಸ್ವಾಮಿ ನೇತೃತ್ವದಲ್ಲಿ ಸರಕಾರ ಮುಂದಿನ ನಾಲ್ಕು ವರ್ಷ ಮುಂದುವರೆಯಲಿದೆ ಎಂದರು.
ಸಮ್ಮಿಶ್ರ ಸರಕಾರ ಮುಂದುವರೆಸಲು ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಮೈತ್ರಿ ಶಾಸಕರು ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಿದ ರು. ಸುದ್ದಿಗೋಷ್ಠಿಯಲ್ಲಿ ಸಿಎಂ ಕುಮಾರಸ್ವಾಮಿ ಗಾಢವಾದ ಮೌನವಹಿದ್ದರು.