ಲೋಕಸಮರ ಗುರುವಾರ ಮತ ಎಣಿಕೆಗೆ ಸಕಲ ಸಿದ್ಧತೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ: ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ

Share

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಇದೇ ಮೇ 23ರ ಗುರುವಾರ ಬೆಳಿಗ್ಗೆ 8 ಗಂಟೆಯಿಂದ ದೇವಗಿರಿಯ ಸರ್ಕಾರಿ ಇಂಜನೀಯರಿಂಗ್ ಕಾಲೇಜಿನಲ್ಲಿ ಆರಂಭಗೊಳ್ಳಲಿದ್ದು, ಮತ ಎಣಿಕೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದರು.
ಮತ ಎಣಿಕೆ ಸಿದ್ಧತೆ ಕುರಿತಂತೆ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು ಮತ ಎಣಿಕೆ ವಿವರವನ್ನು ತ್ವರಿತವಾಗಿ ಭಿತ್ತರಿಸಲು ಸುತ್ತುವಾರು ವಿವರನ್ನು ಸುವಿಧಾ ಆ್ಯಪ್‍ನಲ್ಲಿ ಅಪ್‍ಲೋಡ್ ಮಾಡಲಾಗುವುದು. ಅಂದಾ ಜು ಮಧ್ಯಾಹ್ನ 2 ರ ವೇಳೆಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಮತ ಎಣಿಕೆಗಾಗಿ ಸರ್ಕಾರಿ ಇಂಜನೀಯರಿಂಗ್ ಕಾಲೇಜಿನಲ್ಲಿ 10 ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಹಾವೇರಿ ಲೋಕಸಭಾ ಕ್ಷೇತ್ರದ ಹಾವೇರಿ ಜಿಲ್ಲೆಯ ಐದು ಹಾಗೂ ಗದಗನ ಮೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಎಂಟು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಗೆ ತಲಾ ಒಂದೊಂದು ಕೊಠಡಿ ಹಾಗೂ ಇ.ವಿ.ಎಂ. ಮತ ಎಣಿಕೆಗೆ ಹಾಗೂ ಅಂಚೆ ಮತಪತ್ರ ಎಣಿಕೆ ತಲಾ ಒಂದು ಕೊಠಡಿಯನ್ನು ನಿಗಧಿಪಡಿಸಲಾಗಿದೆ. ಪ್ರತಿ ಕೊಠಡಿಯಲ್ಲಿ 14 ಟೇಬ ಲ್‍ಗಳಂತೆ ಒಟ್ಟಾರೆ 126 ಟೇಬಲ್‍ಗಳನ್ನು ಅಳವಡಿಸಲಾಗಿದೆ. ಶಿರಹಟ್ಟಿ-18, ಗದಗ-16, ರೋಣ-20, ಹಾನಗಲ್-18, ಹಾವೇರಿ-19, ಬ್ಯಾಡಗಿ-17, ಹಿರೇಕೆರೂರು-16 ಹಾಗೂ ರಾಣೇಬೆ ನ್ನೂರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ 19 ಸುತ್ತುಗಳಲ್ಲಿ ನಡೆಯಲಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದ ಆಯ್ದ ಐದು ಮತಗಟ್ಟೆಗಳ ವಿವಿಪ್ಯಾಟ್‍ಗಳ ಮತ ಎಣಿಕೆ ನಡೆಸಲಾಗು ವುದು ಎಂದರು.
ಪಾರದರ್ಶಕ ಹಾಗೂ ವ್ಯವಸ್ಥಿತ ಮತ ಎಣಿಕೆಗೆ ಈಗಾಗಲೇ ಸಿಬ್ಬಂದಿಗಳಿಗೆ ತರಬೇತಿ ಗಳನ್ನು ನೀಡಲಾಗಿದೆ. ಎಣಿಕೆ ಕಾರ್ಯಕ್ಕಾಗಿ 134 ಮತ ಎಣಿಕೆ ಮೇಲ್ವಿಚಾರಕರನ್ನು, 143 ಎಣಿಕೆ ಸಹಾಯಕರನ್ನು ಹಾಗೂ 175 ಸೂಕ್ಷ್ಮ ವೀಕ್ಷಕರನ್ನು ನೇಮಿಸಲಾಗಿದೆ. ಸಿಬ್ಬಂದಿ ಗಳನ್ನು ರ್ಯಾಂಡಮೇಜೇಷನ್ ಪ್ರಕ್ರಿಯೆ ಮೂಲಕ ಆಯ್ದಕೊಳ್ಳಲಾಗಿದೆ. ಎಣಿಕೆ ಸಿಬ್ಬಂದಿ ಗಳ 3ನೇ ಹಂತದ ರ್ಯಾಂಡಮೇಜೇಷನ್‍ನ್ನು ಮತ ಎಣಿಕೆ ದಿನದಂದು ಬೆಳಿಗ್ಗೆ 5-30 ಗಂಟೆಗೆ ಚುನಾವಣಾ ವೀಕ್ಷಕರ ಸಮ್ಮುಖದಲ್ಲಿ ನಡೆಸಿ ಟೇಬಲ್‍ಗಳನ್ನು ನಿಗದಿಪಡಿಸಲಾ ಗುತ್ತದೆ. ಟ್ಯಾಬುಲೇಷನ್, ಸ್ಟ್ರಾಂಗ್ ರೂಂ ಸಿಬ್ಬಂದಿ ಒಳಗೊಂಡಂತೆ ಮತ ಎಣಿಕೆ ಕಾರ್ಯಕ್ಕೆ ಒಟ್ಟಾರೆಯಾಗಿ 703 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮತ ಎಣಿಕೆ ಸಿಬ್ಬಂದಿಗೆ, ಭದ್ರತಾ/ಪೊಲೀಸ್ ಸಿಬ್ಬಂದಿಗಳಿಗೆ ಹಾಗೂ ಮತ ಎಣಿಕೆ ಏಜೆಂಟರಿಗೆ ಪ್ರತ್ಯೇಕ ಕೌಂಟರ್‍ಗಳಲ್ಲಿ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು. ಮತ ಎಣಿಕೆ ಪ್ರಕ್ರಿಯೆ: ಮೇ 23 ರಂದು ಬೆಳಿಗ್ಗೆ 7-30ಕ್ಕೆ ಚುನಾವಣಾ ವೀಕ್ಷಕರು, ಅಭ್ಯರ್ಥಿಗಳು, ಎಣಿಕೆ ಏಜೆಂಟರ ಸಮ್ಮುಖದಲ್ಲಿ ಭದ್ರತಾ ಕೊಠಡಿಗಳನ್ನು ತೆರೆಯಲಾಗುವುದು. ಮತ ಯಂತ್ರಗಳನ್ನು ಎಣಿಕೆ ಕೊಠಡಿಗೆ ಸಾಗಿಸಲಾಗುವುದು. ಬೆಳಿಗ್ಗೆ 8-00 ಗಂಟೆಗೆ ಅಂಚೆ ಮತಪತ್ರಗಳ ಎಣಿಕೆ, ಬೆಳಿಗ್ಗೆ 8-30ಕ್ಕೆ ಇ.ವಿ.ಎಂ.ಗಳ ಎಣಿಕೆ ಪ್ರಾರಂಭಿಸಲಾಗುತ್ತದೆ. ನಂತರ ಪ್ರತಿ ವಿಧಾನಸಭಾ ಕ್ಷೇತ್ರದ ಆಯ್ದ ಐದು ಮತಗಟ್ಟೆಗಳ ವಿವಿಪ್ಯಾಟ್‍ಸ್ಲಿಪ್‍ಗಳನ್ನು ಎಣಿಕೆ ಮಾಡಲು ಪ್ರಾರಂಭಿಸಲಾಗುತ್ತದೆ. ಪ್ರತಿ ಎಣಿಕೆ ಕೊಠಡಿಯಲ್ಲಿಯೂ ಪ್ರದರ್ಶಕದ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಸುತ್ತಿನ ಒಟ್ಟು ಮತಗಳನ್ನು ಪ್ರದರ್ಶಿಸಲಾಗುತ್ತದೆ ಎಂದು ತಿಳಿಸಿದರು.
ಭದ್ರತೆ ಕುರಿತಂತೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಅವರು ಮಾತನಾಡಿ, ಎಣಿಕೆ ಸಿಬ್ಬಂದಿ, ಅಧಿಕಾರಿ, ಪೊಲೀಸ್, ರಾಜಕೀಯ ಪಕ್ಷಗಳ ಏಜೆಂಟರಿಗೆ ಪ್ರತ್ಯೇಕ ಬಣ್ಣದ ಪಾಸ್ ವ್ಯವಸ್ಥೆ ಮಾಡಲಾಗಿದೆ. ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶಾವಕಾಶವಿದೆ. ವಾಹನ ನಿಲುಗಡೆ ಹಾಗೂ ಪಾಸ್ ಹೊಂದಿದವರಿಗೆ ಪ್ರತ್ಯೇಕ ಪ್ರವೇಶ ಮಾರ್ಗವನ್ನು ಗುರುತಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್, ಟ್ಯಾಬ್, ಲ್ಯಾಪಟಾಪ್ ಇತರೆ ಎಲೆಕ್ಟ್ರಾನಿಕ್ ವಸ್ತುಗಳು, ಬೆಂಕಿಪಟ್ಟಣ, ಬಿಡಿ, ಸಿಗರೇಟ್, ನೀರಿನ ಬಾಟಲ್, ಸ್ಫೋಟ್‍ಕಗಳು, ತಂಬಾಕು ಉತ್ಪನ್ನಗಳನ್ನು, ಬ್ಲೇಡ್, ಆಯುಧ, ಎಲೆ ಅಡಿಕೆ, ಗುಟಕಾ ಅಗ್ನಿಜನ್ಯವಸ್ತುಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಮತ ಎಣಿಕೆ ಕೇಂದ್ರದ ಬಂದೋಬಸ್ತ್‍ಗಾಗಿ ನಾಲ್ಕು ಜನ ಡಿ.ವೈ.ಎಸ್.ಪಿ., 11 ಜನ ಇನ್ಸಪೆಕ್ಟರ್, 21 ಜನ ಸಬ್ ಇನ್ಸಪೆಕ್ಟರ್, ನಾಲ್ಕು ಕೆ.ಎಸ್.ಆರ್.ಪಿ.ತುಕಡಿ, 11 ಡಿ.ಎ.ಆರ್.ತುಕಡಿ ಹಾಗೂ 200 ಜನ ಹೋಮ್‍ಗಾರ್ಡ್ ಹಾಗೂ ಸಾಕಷ್ಟು ಪೊಲೀಸ್ ಪೇದೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ಮೇ 23 ರಂದು 144 ಕಲಂ ಜಾರಿಗೊಳಿಸಲಾಗಿದೆ. ಅಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12-00 ಗಂಟೆವರೆಗೆ ಮದ್ಯಪಾನ ಹಾಗೂ ಮದ್ಯಮಾರಾಟ ನಿಚೇಧಿಸಲಾಗಿದೆ. ಈ ಸಂದರ್ಭದಲ್ಲಿ ವಿಜಯೋತ್ಸವ ಆಚರಣೆ, ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುವುದು, ಶಾರಕ ಪದಾರ್ಥ, ಸ್ಪೋಟಕ ವಸ್ತುಗಳು, ದಾಹಕ ವಸ್ತುಗಳು ಜೊತೆಗಿಟ್ಟುಕೊಂಡು ಓಡಾಡುವುದು, ಬೈಕ್ ರ್ಯಾಲಿ, ಸಭೆ-ಸಮಾರಂಭ ಅಥವಾ ಮೆರವಣಿಗೆ ನಡೆಸುವಂತಿಲ್ಲ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಪೊಲೀಸ್ ಅಧಿಕಾರಿಗಳನ್ನು ಹಾಗೂ ಸಿಬ್ಬಂದಿಗಳನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಿ ಯಾವುದೇ ಅಹಿತಕರ ಘಟನೆ ಅವಕಾಶವಿಲ್ಲದಂತೆ ಮುಂಜಾಗ್ರತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಮಾಧ್ಯಮಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಉಪಸ್ಥಿತರಿದ್ದರು.

Leave a Reply

Your email address will not be published.