ವಿಜ್ಞಾನ, ಇಂಜಿನಿಯರಿಂಗ್ ಪಿ.ಹೆಚ್.ಡಿ. ಸಂಶೋಧನೆಗೆ ಡಿ.ಎಸ್.ಟಿ. ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

Share

ಹಾವೇರಿ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ವಿಜ್ಞಾನ ಮತ್ತು ಇಂಜಿನಿಯರಿಂಗ್‍ನಲ್ಲಿ ಪಿ.ಹೆಚ್.ಡಿ. ಸಂಶೋಧನೆಗೆ ಡಿ.ಎಸ್.ಟಿ. ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸಿದೆ. ಸದರಿ ಯೋಜನೆಯಡಿ ಶಿಷ್ಯವೇತನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸೆ,ಕಾಲೇಜುಗಳಲ್ಲಿ, ಪಿ.ಹೆಚ್.ಡಿ. ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ನವಂಬರ್ 16 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ http://ksteps.karnataka.gov.in ಜಾಲತಾಣಕ್ಕೆ ಭೇಟಿ ನೀಡಲು ಕೋರಿದೆ.