ವಿದೇಶಿ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ

Share

ಹಾವೇರಿ: ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಎಚ್. ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ, ಹಾಗೂ 3ಬಿಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‍ಲೈನ್ ಅರ್ಜಿ ಸಲ್ಲಿಸಲು ದಿನಾಂಕ 15-10-2019 ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್‍ www.backwardclasses.kar.nic.in ಹಾಗೂ ದೂರವಾಣಿ 8050770004ನ್ನು ಕಚೇರಿ ಕೆಲಸದ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.