ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Share

ಹಾವೇರಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸರಕು ಸಾಗಾಣಿಕೆ ವಾಹನಕ್ಕೆ, ಹನಿ ನೀರಾವರಿ, ಪಾಲಿ/ನೆರಳು ಮನೆ, ಹೈನುಗಾರಿಕೆ, ಹಸು, ಎಮ್ಮೆ ಕರು ಘಟಕ, ಕುರಿ/ ಮೇಕೆ  ಘಟಕ, ಮೊಲ ಸಾಕಾಣಿಕೆಗೆ  ಸಹಾಯಧನ ನೀಡಲು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ  ಆಹ್ವಾನಿಸಲಾಗಿದೆ.


ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಕಚೇರಿಗಳಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿಮಾಡಿದ ಅರ್ಜಿಯನ್ನು ದಿನಾಂಕ 04-09-2019ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:08375-249022ನ್ನು ಕೆಲಸದ ಸಮಯದಲ್ಲಿ ಸಂಪರ್ಕಿಸಬಹುದು.