ಶಿಗ್ಗಾಂವ ತಾಲೂಕಿನ ವಿವಿಧ ಬಿ.ಸಿ.ಎಂ. ಹಾಸ್ಟೇಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Share

ಹಾವೇರಿ: ಶಿಗ್ಗಾಂವ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಳಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಐದರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವಿದೆ.
ಶಿಗ್ಗಾಂವ ತಾಲೂಕಿನ ಶಿಗ್ಗಾಂವ ನಗರ, ಬಂಕಾಪೂರ, ಹೋತನಹಳ್ಳಿ, ದುಂಢಸಿ, ಶಿಶುವಿನಹಾಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಶಿಗ್ಗಾಂವ ನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಸರ್ಕಾರಿ ವಸತಿ ನಿಲಯಗಳಿಗೆ ಪ್ರವೇಶಾವಕಾಶವಿದೆ. ಶಿಗ್ಗಾಂವ ತಾಲೂಕಿನ ಶಿಶುವಿನಹಾಳ ಗ್ರಾಮದಲ್ಲಿ ಅನುದಾನಿತ ಖಾಸಗಿ ಉಚಿತ ಪ್ರಸಾದ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವಿದೆ.
ವಿದ್ಯಾರ್ಥಿಗಳು ತಹಶೀಲ್ದಾರರಿಂದ ಪಡೆದ ಜಾತಿ ಹಾಗೂ ಆದಾಯ ಪ್ರಮಾಣಪತ್ರ, 2018-19ನೇ ಸಾಲಿನಲ್ಲಿ ಉತ್ತೀರ್ಣರಾದ ಅಂಕಪಟ್ಟಿ, ಹುಟ್ಟೂರಿಗೂ ವಿದ್ಯಾರ್ಥಿ ನಿಲಯ ಇರುವ ಊರಿಗೂ ಅಂತರ ಕುರಿತಂತೆ ಗ್ರಾಮ ಪಂಚಾಯತಿಯಿಂದ ಪ್ರಮಾಣಪತ್ರ, ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಬ್ಯಾಂಕ್ ಖಾತೆ ಝರಕ್ಸ್ ಪ್ರತಿ, ಮೂರು ಪಾಸ್ ಪೋರ್ಟ ಅಳತೆಯ ಭಾವಚಿತ್ರದೊಂದಿಗೆ ದಿನಾಂಕ:10-06-2019ರೊಳಗಾಗಿ ಭರ್ತಿಮಾಡಿದ ಅರ್ಜಿಗಳನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ನಮೂನೆಗಳನ್ನು ತಾಲೂಕಾ ವಿಸ್ತರಣಾಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಳಂದಾ ಸ್ಕೂಲ್ ಹತ್ತಿ ಶಿಗ್ಗಾಂವ ಇಲ್ಲಿ ಪಡೆಯಬಹುದು. ಸದರಿ ವಿಳಾಸಕ್ಕೆ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.