ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ಖರೀದಿಸಲು ಅರ್ಜಿ ಆಹ್ವಾನ

Share

ಹಾವೇರಿ: ಪ್ರವಾಸೋದ್ಯಮ ಇಲಾಖೆಯಿಂದ ಪ್ರಸ್ತುತ 2019-20 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗದ ನಿರುದ್ಯೋಗಿಗಳಿಗೆ ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಿಸಲು ಯೋಜಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಫಲಾನುಭವಿಗಳು ಜುಲೈ 29 ರೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕು. ವೆಬ್ ಸೈಟ್ http://dpchaveri.nic.in ಲಿಂಕ್ ನಿಂದ ತುಂಬಿ ದ್ವಿ- ಪ್ರತಿಯಲ್ಲಿ ಸಹಾಯಕ ನಿರ್ದೇಶಕರು ಪ್ರವಾಸೋದ್ಯಮ ಇಲಾಖೆ ಎ ಬ್ಲಾಕ್ 2ನೇ ಮಹಡಿ ಜಿಲ್ಲಾಧಿಕಾರಿ ಕಚೇರಿ ಸಮಚ್ಛಯ ದೇವಗಿರಿ, ಹಾವೇರಿ ಇಲ್ಲಿ ಖುದ್ದಾಗಿ ಸಲ್ಲಿಸಬೇಕು. ಹೆಚ್ಚಾನ ಮಾಹಿತಿಗೆ ಮೊ: 7019836973 ಕರೆ ಮಾಡಬಹುದು ಎಂದು ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.