ಸ್ವಯಂ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

Share

ಹಾವೇರಿ: ಜಿಲ್ಲೆಯ ನಿರೂದ್ಯೋಗಿ ಯುವಕ/ಯುವತಿಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಉಚಿತ ತರಬೇತಿ ನೀಡಲು ವಿಜಯಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‍ಸೆಟಿ ವತಿಯಿಂದ ಅರ್ಜಿ ಆಹ್ವಾನಿಸಿದೆ.

ತರಬೇತಿ ಶಿಬಿರವು ಸೆಪ್ಟೆಂಬರ್ 11 ರಿಂದ 45 ದಿನಗಳ ಜರುಗಲಿದೆ. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು.

ಆಸಕ್ತ 18-45ರ ವಯೋಮಾನದ ನಿರೂದ್ಯೋಗಿ ಯುವಕ ಯುವತಿಯರು ಹತ್ತಿರದ ವಿಜಯಾ ಬ್ಯಾಂಕ್, ದೇನಾ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡದಲ್ಲಿ ಅರ್ಜಿ ನಮೂನೆಗಳನ್ನು ಪಡೆದು ಜಾತಿ ಮತ್ತು ಆದಾಯ, ಆಧಾರ ಕಾರ್ಡ್, ಪಡಿತರ ಚೀಟಿ ಮತ್ತು ಇತ್ತಿಚಿನ ಭಾವಚಿತ್ರ, ಜನ್ಮ ದಿನಾಂಕ ದೃಢೀಕರಣ ಅಥವಾ ಶಾಲಾ ದೃಢೀಕರಣ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ದಿನಾಂಕ 07-09-2019ರ ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು ವಿಜಯಾ ಬ್ಯಾಂಕ್ ಸ್ವ-ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ. ದೂ.ಸಂಖ್ಯೆ 08375-249160, 9740377623ನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು.