ಸ್ವ ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

Share

ಹಾವೇರಿ: ಭಾರತ ಸರ್ಕಾರ ಗ್ರಾಮೀಣ ಅಭಿವೃದ್ಧಿ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುವ “ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ” ಸಂಸ್ಥೆಯ ಮೂಲಕ 30 ದಿನಗಳ ಮೋಬೈಲ್ ರಿಪೇರಿ ಮತ್ತು ಸರ್ವಿಸ್ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಊಟ ಮತ್ತು ವಸತಿಯೊಂದಿಗೆ ಉಚಿತ ತರಬೇತಿ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಶನ್ ಕಾರ್ಡ್, ಆಧಾರ ಕಾರ್ಡ್, ನಾಲ್ಕು ಪೋಟೋ ಹಾಗೂ ಬ್ಯಾಂಕ್ ಪಾಸ್ ಪುಸ್ತಕ ಝರಾಕ್ಸ್ ಪ್ರತಿಗಳೊಂದಿಗೆ ದಿನಾಂಕ 15-02-2020ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08375 – 249160 ಹಾಗೂ ಮೊ. 9740377623 ಸಂಪರ್ಕಿಸಬಹುದು.