ಹಾವೇರಿ: ಓರ್ವನಿಗೆ ಕೋವಿಡ್ 19 ಸೋಂಕು ದೃಢ

Share

ಹಾವೇರಿ: ಜಿಲ್ಲೆಯ ಶಿಗ್ಗಾಂವ ನಗರದ ಗಾಡ್ರ ಓಣಿ ನಿವಾಸಿ 46 ವರ್ಷದ ಓರ್ವನಿಗೆ (P-6832) ಭಾನುವಾರ ಕೋವಿಡ್ 19 ಸೋಂಕು ದೃಢಪಟ್ಟಿದೆ.

ತನ್ನ ತಾಯಿಯ ಪ್ರಾಥಮಿಕ ಸಂಪರ್ಕದ ಕಾರಣ ಇವರ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲಾಗಿತ್ತು. ಸೋಂಕಿತನ ತಾಯಿ (P-6252) ಹುಬ್ಬಳ್ಳಿ ಕಿಮ್ಸ್ ನಲ್ಲಿ ಕೋವಿಡ್ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ ಜಿಲ್ಲೆಯಲ್ಲಿ 24 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 21 ಜನರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿ ಇವೆ.