ಹಾವೇರಿ: ಮಹಾರಾಷ್ಟ್ರ ನಂಟು ಹೊಸ 2 ಕೋವಿಡ್ 19 ಪ್ರಕರಣ ಪತ್ತೆ

Share

ಹಾವೇರಿ: ನಿನ್ನೆ ತಾನೇ ಹಸಿರು ವಲಯಕ್ಕೆ ಸೇರಿದ್ದ ಜಿಲ್ಲೆಯಲ್ಲಿ ಶನಿವಾರ ಹೊಸ ಎರಡು ಕೋವಿಡ್ 19 ಪ್ರಕರಣಗಳು ಪತ್ತೆಯಾಗಿವೆ.

ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ 23 ವರ್ಷದ ಪುರುಷ ಹಾಗೂ 34 ವರ್ಷದ ಮಹಿಳೆಗೆ ಕೊರೋನಾ ಸೋಂಕು ಇರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ.

ಸೇವಾ ಸಿಂಧು ಆ್ಯಪ್ ನಲ್ಲಿ ನೊಂದಣಿ ಮಾಡಿಕೊಂಡು ಬಂದಿದ್ದ 23 ವರ್ಷದ ಪುರುಷ ಹಾವೇರಿ ತಾಲ್ಲೂಕಿನ ಕೋಳೂರು ಗ್ರಾಮದ ನಿವಾಸಿಯಾಗಿದ್ದು, 34 ವರ್ಷದ ಮಹಿಳೆಗೆ ಹಾವೇರಿಯ ನಿವಾಸಿಯಾಗಿದ್ದಾಳೆ. ಸೋಂಕಿತರು ಮಹಾರಾಷ್ಟ್ರದಿಂದ ರೈಲಿನಲ್ಲಿ ಗದಗ ರೈಲ್ವೆ ನಿಲ್ದಾಣಕ್ಕೆ ಬಂದು ಅಲ್ಲಿಂದ ಹಾವೇರಿಗೆ ಬಸ್ ಮೂಲಕ ಆಗಮಿಸಿದ್ದರು. ಇವರನ್ನು ಕ್ವಾರಟೈನ್ ಸೆಂಟರ್ ನಲ್ಲಿ ಇರಿಸಲಾಗಿತ್ತು. ಕೋವಿಡ್ ಸೋಂಕು ದೃಢಪಟ್ಟ ನಂತರ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಸೋಂಕಿತರನ್ನು ಸ್ಥಳಾಂತರಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈವರೆಗೆ ಜಿಲ್ಲೆಯಲ್ಲಿ 23 ಜನರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, 21 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.