ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಅವಳಿ ಆತ್ಮಹತ್ಯೆ

Share

ಹುಬ್ಬಳ್ಳಿ, ಜೂನ 25: ವಾಣಿಜ್ಯ ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಗರದ ಹಳೇ ಬಸ್ ನಿಲ್ದಾಣ ಮತ್ತು ರೇಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಆಪರಿಚಿತ ವ್ಯಕ್ತಿಗಳಿಬ್ಬರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.

ಎರಡು ಘಟನೆಗಳ ಕುರಿತು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ರೈಲ್ವೆ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಗಳ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.