64 ಪ್ರಕರಣ ನೆಗೆಟಿವ್‌

Share

ಹಾವೇರಿ: ಜಿಲ್ಲೆಯಿಂದ ಪ್ರಯೋಗಾಲಯಕ್ಕೆ ಕಳುಹಿಸಿದ್ದ ಗಂಟಲು ದ್ರವದ ಮಾದರಿಗಳಲ್ಲಿ 64 ವರದಿಗಳು ಸೋಮವಾರ ನೆಗೆಟಿವ್‌ ಎಂದು ಬಂದಿದ್ದು, ಇದುವರೆಗೂ ಜಿಲ್ಲೆಯಲ್ಲಿ ಕೋವಿಡ್‌–19 ಪ್ರಕರಣ ದೃಢಪಟ್ಟಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ರಾಜೇಂದ್ರ ದೊಡ್ಡಮನಿ ತಿಳಿಸಿದ್ದಾರೆ.

ಸೋಮವಾರ 126 ವ್ಯಕ್ತಿಗಳ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದುವರೆಗೂ ಒಟ್ಟು 551 ವ್ಯಕ್ತಿಗಳ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು, ಅದರಲ್ಲಿ 346 ಪ್ರಕರಣಗಳು ನೆಗೆಟಿವ್‌ ಎಂದು ವರದಿ ಬಂದಿದೆ. 205 ಪ್ರಕರಣಗಳ ವರದಿ ಬರುವುದು ಬಾಕಿ ಇದೆ ಎಂದು ತಿಳಿಸಿದ್ದಾರೆ.

‌ಜಿಲ್ಲೆಯಲ್ಲಿ ಒಟ್ಟು 507 ಮಂದಿಯ ಮೇಲೆ ನಿಗಾ ಇಡಲಾಗಿದ್ದು, 208 ಮಂದಿ 28 ದಿನಗಳನ್ನು ಪೂರೈಸಿದ್ದಾರೆ. 11 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದು, 32 ಮಂದಿ ಐಸೋಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.