71 ಪ್ರಕರಣಗಳು ನೆಗೆಟಿವ್

Share

ಹಾವೇರಿ: ಜಿಲ್ಲೆಯಿಂದ ಪ್ರಯೊಗಾಲಯಕ್ಕೆ ಕಳುಹಿಸಲಾಗಿದ್ದ 71 ಜನರ ಗಂಟಲು ದ್ರವದ ಮಾದರಿಗಳ ವರದಿಗಳು ಶುಕ್ರವಾರ ಬಂದಿದ್ದು, ಎಲ್ಲವೂ ನೆಗೆಟಿವ್ ಆಗಿವೆ. ಈವರೆಗೆ ಜಿಲ್ಲೆಯಲ್ಲಿ ಯಾವುದೇ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಂದ್ರ ದೊಡ್ಡಮನಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 219 ಜನರ ಮೆಲೆ ನಿಗಾ ವಹಿಸಲಾಗಿದ್ದು, 24 ಮಂದಿ ಹೋಂ ಕ್ವಾರಂಟೈನ್‍ನಲ್ಲಿ ಇದ್ದಾರೆ. 195 ಜನರು 28 ದಿನಗಳನ್ನು ಪೂರೈಸಿದ್ದಾರೆ. ಶುಕ್ರವಾರ ಜಿಲ್ಲೆಯಿಂದ ಹೊಸದಾಗಿ 25 ಜನರ ಗಂಟಲು ದ್ರವದ ಮಾದರಿಗಳನ್ನು ಪ್ರಯೊಗಾಲಯಕ್ಕೆ ರವಾನಿಸಲಾಗಿದೆ. ಈವರೆಗೆ ಜಿಲ್ಲೆಯಿಂದ ಒಟ್ಟು 298 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಅದರಲ್ಲಿ 232 ವರದಿಗಲು ನೆಗೆಟಿವ್ ಬಂದಿವೆ. ಇನ್ನೂ 66 ಮಾದರಿಗಳ ವರದಿ ಬರಬೇಕಿದೆ ಎಂದು ಡಿಎಚ್‍ಒ ಮಾಹಿತಿ ನೀಡಿದ್ದಾರೆ.