80 ವರದಿಗಳು ನೆಗೆಟಿವ್‌

Share

ಹಾವೇರಿ: ರಾಣೆಬೆನ್ನೂರು ಮತ್ತು ಹಿರೇಕೆರೂರಿನ ಎರಡು ಪ್ರಕರಣಗಳು ಸೇರಿದಂತೆ ಜಿಲ್ಲೆಯಿಂದ ಪ್ರಯೋಗಾಲಯಕ್ಕೆ ಕಳುಹಿಸಿದ್ದ ಒಟ್ಟು 80 ಪ್ರಕರಣಗಳ ವರದಿ ಗುರುವಾರ ಬಂದಿದ್ದು, ಎಲ್ಲವೂ ನೆಗೆಟಿವ್‌ ಆಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ ತಿಳಿಸಿದ್ದಾರೆ.

ಗುರುವಾರ 143 ವ್ಯಕ್ತಿಗಳ ಗಂಟಲು ದ್ರವದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಜಿಲ್ಲೆಯಿಂದ ಈವರೆಗೆ 890 ವರದಿಗಳನ್ನು ಕಳುಹಿಸಿದ್ದು, ಅವುಗಳಲ್ಲಿ 536 ವರದಿಗಳು ನೆಗೆಟಿವ್‌ ಎಂದು ಬಂದಿವೆ. ಇನ್ನೂ 354 ಪ್ರಕರಣಗಳ ವರದಿಗಳು ಬರಬೇಕಿದೆ. ಈವರೆಗೂ ಯಾವುದೇ ಕೋವಿಡ್‌–19 ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಒಟ್ಟು 840 ವ್ಯಕ್ತಿಗಳ ಮೇಲೆ ನಿಗಾ ವಹಿಸಲಾಗಿದ್ದು, 216 ಮಂದಿ 28 ದಿನಗಳನ್ನು ಪೂರೈಸಿದ್ದಾರೆ. 3 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. 10 ಮಂದಿ ಐಸೋಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.