ಹಾವೇರಿ ಬಿಜೆಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಜಿ.ಪಂ.ಸದಸ್ಯ ಸಿದ್ದರಾಜ ಕಲಕೋಟಿ ಆಯ್ಕೆ

Share

ಹಾವೇರಿ: ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯತ ಸದಸ್ಯ ಸಿದ್ದರಾಜ ಕಲಕೋಟಿ ಅವರು ಆಯ್ಕೆಯಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಅನಂತ ರೆಸಿಡೆನ್ಸಿಯ ಸಭಾಂಗಣದಲ್ಲಿ ಭಾನುವಾರ ಬೆಳಿಗ್ಗೆ ನೂತನ ಜಿಲ್ಲಾಧ್ಯಕ್ಷರ ಆಯ್ಕೆಗೆ ನಡೆದ ಸಭೆಯಲ್ಲಿ ಸಭೆಗೆ ವೀಕ್ಷಕರಾಗಿ ಆಗಮಿಸಿದ್ದ ಸಚಿವ ಸಿ.ಟಿ.ರವಿ ನೂತನ ಅಧ್ಯಕ್ಷರಾಗಿ ಕಲಕೋಟಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ನೂತನ ಅಧ್ಯಕ್ಷ ಸಿದ್ದರಾಜ ಕಲಕೋಟಿಯವರನ್ನು ಸಚಿವ ಸಿ.ಟಿ.ರವಿ ಮಾಜಿ ಸಂಸದ ಮಂಜುನಾಥ ಕುನ್ನೂರ, ಮಾಜಿ ಶಾಸಕ, ನಿರ್ಗಮಿತ ಅಧ್ಯಕ್ಷ ಶಿವರಾಜ ಸಜ್ಜನರ, ಮಾಜಿ ಶಾಸಕ ಶಂಕರ, ಡಿ.ಎಂ.ಸಾಲಿ, ಪ್ರಭು ಹಿಟ್ನಳ್ಳಿ, ಭೋಜರಾಜ ಕರೂದಿ, ಡಾ.ಬಸವರಾಜ ಕೇಲಗಾರ, ಜಯತೀರ್ಥ ಕಟ್ಟಿ ಮತ್ತಿತರರು ಅಭಿನಂದಿದ್ದಾರೆ.