ಡಿ.ದೇವರಾಜ ಅರಸು ಜಯಂತಿ ಸರಳ ಆಚರಣೆ

Share

ಹಾವೇರಿ: ಜಿಲ್ಲಾಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಸಾಮಾಜಿಕ ಪರಿವರ್ತನೆಯ ಹರಿಕಾರ ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸು ಅವರ 105ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ತಾಲೂಕ ಪಂಚಾಯತ್ ಅಧ್ಯಕ್ಷೆ ಕಮಲವ್ವ ಪಾಟೀಲ, ಜಿಲ್ಲಾ ಪಂಚಾಯತ್ ಸಿಇಒ ರಮೇಶ ದೇಸಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಎಚ್.ಎ ಜಮಖಾನೆ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಚೈತ್ರಾ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮಠದ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಇದ್ದರು.