ಹಾವೇರಿ: 80 ಮಂದಿಗೆ ಕೋವಿಡ್ ದೃಢ, 69 ಗುಣಮುಖ

Share

ಹಾವೇರಿ: ಆರೋಗ್ಯ ಇಲಾಖೆಯ ಗ್ರೂಪ್ ಡಿ ನೌಕರ ಸೇರಿದಂತೆ ಹಾವೇರಿ ಜಿಲ್ಲೆಯಲ್ಲಿ ಭಾನುವಾರ 80 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, 69 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 1844 ಕೋವಿಡ್-19 ಪ್ರಕರಣಗಳು ದೃಢಗೊಂಡಿವೆ. ಒಟ್ಟು 1022 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 36 ಮಂದಿ ಮೃತಪಟ್ಟಿದ್ದು, 786 ಪ್ರಕರಣಗಳು ಸಕ್ರಿಯವಾಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.