ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೋವಿಡ್ ದೃಢ

Share

ಹಾವೇರಿ: ಗೃಹ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿಗೆ ಕೋವಿಡ್-19 ಸೋಂಕು ದೃಢ ಪಟ್ಟಿದ್ದು, ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲದ ಕಾರಣ ಅವರು ಮನೆಯಲ್ಲಿಯೇ ಪ್ರತ್ಯೇಕವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಗೃಹ ಸಚಿವರ ಮನೆಯಲ್ಲಿ ಕಾರ್ಯನಿರ್ವಹಿಸುವ ಕೆಲಸಗಾರನೊಬ್ಬನಿಗೆ ಮಂಗಳವಾರ ಕೋವಿಡ್-19 ದೃಢಪಟ್ಟ ಹಿನ್ನಲೆಯಲ್ಲಿ ಅವರು ಬುಧವಾರ ಪರೀಕ್ಷೆಗೆ ಒಳಪಟ್ಟಿದ್ದು, ಸೊಂಕು ದೃಢಪಟ್ಟಿದೆ. ಈ ಬಗ್ಗೆ ಅವರು ತಮ್ಮ ಟ್ವಿಟರ್ ಖಾತೆಯ ಮೂಲಕ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಸಚಿವರ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಕೋವಿಡ್ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.