ಹಾವೇರಿ: ಸವಣೂರಿನ 9 ತಿಂಗಳ ಮಗುವಿಗೆ ಕೋವಿಡ್ ಸೋಂಕು ದೃಢ, 56ಕ್ಕೇರಿದ ಕೋವಿಡ್ ಪ್ರಕರಣ

Share

ಹಾವೇರಿ: ಜಿಲ್ಲೆಯಲ್ಲಿ ಸವಣೂರಿನ 9 ತಿಂಗಳ ಗಂಡು ಮಗುವಿಗೆ ಶನಿವಾರ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 56 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಪೈಕಿ 25 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 31 ಪ್ರಕರಣಗಳು ಸಕ್ರಿಯವಾಗಿವೆ. ಈ ಪೈಕಿ ಓರ್ವ ಸೋಂಕಿತರು ಐ.ಸಿ.ಯು.ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.