ಹಾವೇರಿ: ಮತ್ತೆ 56 ಮಂದಿಗೆ ಕೋವಿಡ್ ಸೋಂಕು ದೃಢ

Share

ಹಾವೇರಿ: ಕೆಎಸ್ಆರ್.ಪಿ ಪೋಲಿಸ್ ಕಾನ್‍ಸ್ಟೇಬಲ್ ಸೇರಿದಂತೆ ಶುಕ್ರವಾರ ಜಿಲ್ಲೆಯಲ್ಲಿ 56 ಜನರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. 31 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ 390 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಗೊಂಡಿವೆ. ಇಂದಿನವರೆಗೆ 275 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಹೊಂದಿದ್ದಾರೆ ಹಾಗೂ ಈವರೆಗೆ ಏಳು ಜನರು ಮೃತಪಟ್ಟಿದ್ದಾರೆ. 108 ಪ್ರಕರಣಗಳು ಸಕ್ರಿಯವಾಗಿವೆ.

ಶುಕ್ರವಾರ ರಾಣೇಬೆನ್ನೂರು ತಾಲೂಕಿನಲ್ಲಿ 36, ಹಾವೇರಿ ತಾಲೂಕಿನಲ್ಲಿ 12 ಹಾಗೂ ಶಿಗ್ಗಾಂವ ತಾಲೂಕಿನಲ್ಲಿ 8 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ನಿಗಧಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಹಾಗೂ ಹಾವೇರಿ-16, ಶಿಗ್ಗಾಂವ ಹಾಗೂ ಹಾನಗಲ್ ತಾಲೂಕಿನ ತಲಾ ನಾಲ್ಕು ಮತ್ತು ಬ್ಯಾಡಗಿ ತಾಲೂಕಿನ 03 ಜನರು ಸೇರಿ 31 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.