ಹಾವೇರಿ: ಕೊರೊನಾ ಸೋಂಕಿನಿಂದ ಇಬ್ಬರು ಸಾವು

Share

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಸೋಂಕಿಗೆ ಮಂಗಳವಾರ ಇಬ್ಬರು ವೃದ್ಧೆಯರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.

ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ದೇಸಾಯಿ ಗಲ್ಲಿಯ ನಿವಾಸಿ 75 ವರ್ಷದ ವೃದ್ಧೆ (P-8295)ಗೆ P-6832ರ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದ್ದು, ಜೂ. 20 ರಂದು ಕೋವಿಡ್-19 ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ಐಸಿಯುನಲ್ಲಿ ಇಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವೃದ್ಧೆ ಇಂದು ಮೃತಪಟ್ಟಿದ್ದಾರೆ.

ಹಾವೇರಿ ತಾಲ್ಲೂಕಿನ ಆಲದಕಟ್ಟಿ ಗ್ರಾಮದ 60 ವರ್ಷದ ವೃದ್ಧೆಗೆ ಸೋಂಕು ದೃಢಪಟ್ಟಿದ್ದು, ಜೂ.24 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಜೂ.28 ರಂದು ಸೋಂಕು ದೃಢಪಟ್ಟಿದ್ದು, ಚಿಕಿತ್ಸೆ ಫಲಿಸದೆ ವೃದ್ಧೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.