ಹಾವೇರಿ: ತ್ರಿಶತಕ ದಾಟಿದ ಸೋಂಕಿತರ ಸಂಖ್ಯೆ

Share

ಹಾವೇರಿ: ಜಿಲ್ಲೆಯಲ್ಲಿ ಭಾನುವಾರ 14 ಮಂದಿಯಲ್ಲಿ ಕೋವಿಡ್‌-19 ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 302ಕ್ಕೆ ಏರಿಕೆಯಾಗಿದೆ.

ಶಿಗ್ಗಾಂವಿ ನಗರದ 70 ವರ್ಷದ ಮಹಿಳೆ ಬಹು ಅಂಗಾಂಗ ವೈಫಲ್ಯದಿಂದ ಹಾಗೂ ರಾಣೆಬೆನ್ನೂರ ನಗರದ 42 ವರ್ಷದ ಮಹಿಳೆ ಸೋಂಕಿನಿಂದ ಭಾನುವಾರ ಅಸುನೀಗಿದರು. ಇದರಿಂದಾಗಿ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಹಾವೇರಿ ಹಾಗೂ ಹಿರೇಕೆರೂರ ತಾಲ್ಲೂಕಿನಲ್ಲಿ ಈ ದಿನ ಹೊಸತಾಗಿ ತಲಾ 05 ಪ್ರಕರಣಗಳು ವರದಿಯಾಗಿವೆ. ಶಿಗ್ಗಾಂವಿ, ಹಾನಗಲ್, ಬ್ಯಾಡಗಿ ಹಾಗೂ ರಾಣೆಬೆನ್ನೂರ ತಾಲ್ಲೂಕಿನಲ್ಲಿ ತಲಾ ಓರ್ವರಿಗೆ ಸೋಂಕು ದೃಢವಾಗಿದೆ. ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

03 ಜನರು ಗುಣಮುಖ: ಕೋವಿಡ್ ಸೋಂಕಿನಿಂದ ಗುಣಮುಖರಾಗುವವರ ಸಂಖ್ಯೆ ಹೆಚ್ಚಿದ್ದು, ಭಾನುವಾರ 03 ಮಂದಿ ಬಿಡುಗಡೆ ಆಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 137 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.