ಹಾವೇರಿ: ಓರ್ವ ವೃದ್ಧೆಗೆ ಕೋವಿಡ್ ಸೋಂಕು ದೃಢ

Share

ಹಾವೇರಿ: ಜಿಲ್ಲೆಯಲ್ಲಿ ಸೋಮವಾರ 60 ವರ್ಷದ ವೃದ್ಧೆಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೆ 69 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಪೈಕಿ 25 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 44 ಪ್ರಕರಣಗಳು ಸಕ್ರಿಯವಾಗಿವೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.

ಹಾವೇರಿ ತಾಲೂಕು ಆಲದಕಟ್ಟಿ ಗ್ರಾಮದ ಬಸವೇಶ್ವರ ನಗರದ ನಿವಾಸಿ 60 ವರ್ಷದ ವೃದ್ಧೆ(P-69) ಕೆಮ್ಮು ಮತ್ತು ಜ್ವರದ ಹಿನ್ನೆಲೆಯಲ್ಲಿ ಜೂನ್ 24 ರಂದು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಜೂನ್ 25 ರಂದು ವೃದ್ಧೆಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಜೂನ್ 27 ರಂದು ಕೋವಿಡ್ ಪಾಸಿಟಿವ್ ವರದಿ ಬಂದಿದೆ.

ಸದರಿ ವೃದ್ಧೆ ಹಾಲಿ ವಾಸಿಸುತ್ತಿದ್ದ ಹಾನಗಲ್ ತಾಲೂಕಿನ ಉಪ್ಪಣಸಿ ಗ್ರಾಮದ ಮನೆಯೊಳಗೊಂಡಂತೆ ಸುತ್ತಲಿನ 100 ಮೀ.ಪ್ರದೇಶವನ್ನು ಕಂಟೈನ್ ಮೆಂಟ್ ಜೋನ್ ಆಗಿ ಪರಿವರ್ತಿಸಲಾಗಿದೆ ಹಾಗೂ ಸಂಪೂರ್ಣ ಗ್ರಾಮವನ್ನು ಬಫರ್ ಜೋನ್ ಆಗಿ ಪರಿಗಣಿಸಲಾಗಿದೆ. ಇನ್ಸಿಡೆಂಟಲ್ ಕಮಾಂಡರ್ ಆಗಿ ಹಾನಗಲ್ ತಹಶೀಲ್ದಾರ ಅವರನ್ನು ನೇಮಕ ಮಾಡಲಾಗಿದೆ.