ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಇನ್ನಿಲ್ಲ!

Share

ನವದೆಹಲಿ: ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ (65) ಬುಧವಾರ ನಿಧನರಾಗಿದ್ದಾರೆ.

ಸಂಸದ ಸುರೇಶ್ ಅಂಗಡಿ ಅವರಿಗೆ ಕಳೆದ ವಾರ ಕೋವಿಡ್ ದೃಢ ಪಟ್ಟಿತ್ತು. ಯಾವುದೇ ರೋಗ ಲಕ್ಷಣ ಇಲ್ಲದಿದ್ದರೂ ಅವರು ವೈದ್ಯರ ಸಲಹೆ ಮೇರೆಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಸಂಸತ್ ಅಧಿವೇಶನಕ್ಕೂ ಮುನ್ನ ಎಲ್ಲಾ ಸಂಸದರಿಗೆ ಕೋವಿಡ್ ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಿದ ಸಂದರ್ಭದಲ್ಲಿ ಸುರೇಶ್ ಅಂಗಡಿ ಅವರಿಗೆ ಸೋಂಕು ದೃಡಪಟ್ಟಿತ್ತು. ಶ್ವಾಸಕೋಶದ ಸೋಂಕಿಗೆ ಗುರಿಯಾಗಿದ್ದ ಅವರನ್ನು ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಇರಿಸಲಾಗಿತ್ತು.

ಸುರೇಶ್ ಅಂಗಡಿ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004, 2009, 2014 ಮತ್ತು 2019ರಲ್ಲಿ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.